COVID-19 Resources for Mental Health Coaches... Learn More

0836-2773878

ಧಾರವಾಡದ ಕರ್ನಾಟಕ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ಡಾ. ಆನಂದ ಪಾಂಡುರಂಗಿ ಉದ್ಘಾಟಿಸಿದರು.

ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ವಿಜಯದ ಮೆಟ್ಟಿಲುಗಳು, ಪರೀಕ್ಷೆಗಳ ಬಗ್ಗೆ ವಿನಾಕಾರಣ ಭಯ ಪಡದೆ ಆನಂದಿಸಬೇಕು ಎಂದು ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಹೇಳಿದರು.

ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಕರ್ನಾಟಕ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಏಕಾಗ್ರತೆಯಲ್ಲಿ ಅಧ್ಯಯನ ಮಾಡುವುದು ಹೇಗೆ? ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಪರೀಕ್ಷೆಯನ್ನು ಲಘುವಾಗಿ ಪರಿಗಣಿಸದೆ. ಪ್ರಾಮಾಣಿಕತೆ, ನಿರ್ದಿಷ್ಟಗುರಿ, ಸಮಯ ಪರಿಪಾಲನೆಯೊಂದಿಗೆ ಅಧ್ಯಯನ ಮಾಡಬೇಕು. ಸಮಯವು ಹಣಕ್ಕಿಂತಲೂ ಬೆಲೆಯುಳ್ಳದ್ದು. ಮನಸು ಗೊಂದಲವಿದ್ದಾಗ ಓದಬಾರದು. ಹೆಚ್ಚು ಅಂಕಗಳಿಸುತ್ತೇನೆ ಎಂಬ ದೃಢ ಸಂಕಲ್ಪ, ಆತ್ಮವಿಶ್ವಾಸದಲ್ಲಿ ಪರೀಕ್ಷೆ ಎದುರಿಸಬೇಕು ಎಂದರು.

ಡಿಮ್ಹಾನ್ಸ್‌ನ ಪ್ರಶಾಂತ ಪಾಟೀಲ ಉಪನ್ಯಾಸ ನೀಡಿ, ಚಂಚಲವಾದ ಮನಸನ್ನು ಕೇಂದ್ರೀಕರಿಸಿ ಓದಬೇಕು. ಓದುವುದನ್ನು ಬಿಟ್ಟು ವಿನಾಕಾರಣ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಏಕಾಗ್ರತೆಗೆ ಭಂಗ ತರುವ ಸನ್ನಿವೇಶಗಳನ್ನು ತಿರಸ್ಕರಿಸಿರಿ. ಪುನರಾವರ್ತನೆ, ಗುಂಪು ಅಧ್ಯಯನದಿಂದ ವಿಷಯದ ಮನನವಾಗುತ್ತದೆ ಎಂದರು.

ಶ್ರೀಧರ ಉದಗಟ್ಟಿ ಮಾತನಾಡಿದರು. ಕೆ.ಇ. ಬೋರ್ಡ್ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ ಅಧ್ಯಕ್ಷತೆ ವಹಿಸಿದ್ದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. ವಿ.ಬಿ. ಶಿಂಗೆ, ಕೆ.ಸಿ. ಪ್ರಕಾಶ, ಲಕ್ಷ್ಮೀ ಪಾಟೀಲ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಪ್ರಜ್ಞಾ ಗಲಗಲಿ, ವಿದ್ಯಾರ್ಥಿಗಳು, ಇತರರಿದ್ದರು. ಎನ್‌.ಎನ್. ಸವಣೂರ ಸ್ವಾಗತಿಸಿದರು. ವೀರಣ್ಣ ಒಡ್ಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೋಭಾದೇವಿ ನಿರೂ ಪಿಸಿದರು. ಪದ್ಮಾವತಿ ಅಂಗಡಿ ವಂದಿಸಿದರು.

About Author:

Leave Your Comments

Your email address will not be published. Required fields are marked *