COVID-19 Resources for Mental Health Coaches... Learn More
“ಸಮಾಜಸೇವೆ ಮಾಡುವ ವ್ಯಕ್ತಿತ್ವ ಬೆಳೆಸಿಕೊಳ್ಳಿ”


ಇಂದಿನ ವಿದ್ಯಾರ್ಥಿಗಳು ಸಂಸ್ಕೃತಿ ಮತ್ತು ಸನ್ಮಾರ್ಗವನ್ನು ಕಲಿತುಕೊಂಡು ಸಾಧನೆಯೊಂದಿಗೆ ಉನ್ನತ ಸ್ಥಾನಕ್ಕೇರಿ ತಂದೆ-ತಾಯಿಯ ಋಣವನ್ನು ತೀರಿಸುವುದರ ಜತೆಗೆ ಸಮಾಜಸೇವೆ ಮಾಡುವ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ನಗರದ ಸಹಾಯಕ ಪೊಲೀಸ್ ಆಯುಕ್ತ. ಪ್ರಶಾಂತ ಸಿದ್ದನಗೌಡರ ಹೇಳಿದರು. ಕ್ಲಾಸಿಕ್ ಕಲಾ, ವಿಜ್ಞಾನ ಮತ್ತು ಮಾರಣ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಧಾರವಾಡ ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾಠ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರಬೇಕು. ಕಾನೂನಿನ ಅರಿವು ಹೊಂದಬೇಕು ಎಂದರು. ಕ್ಲಾಸಿಕ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ| ಆನಂದ ಪಾಂಡುರಂಗಿ ಮಾತನಾಡಿದರು.
ಮನೋವೈದ್ಯ ಡಾ|ಆನಂದ ಪಾಂಡುರಂಗಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಮಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಕಾಶಕರಾದ ರೇಣುಕಾ ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಡಾ| ಎಸ್ ಜಿ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಶೈಕ್ಷಣಿಕ ಸಲಹೆಗಾರ ಡಾ| ಎಂ ವೈ ಸಾವಂತ ವಿದ್ಯಾರ್ಥಿ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಶರಣಬಸವ, ರಕ್ಷಿತಾ ಇದ್ದರು. ಡಾ| ದ್ಯಾಮಣ್ಣ ಗುಡ್ಡಮ್ಮನವರ ನಿರೂಪಿಸಿದರು.


