COVID-19 Resources for Mental Health Coaches... Learn More

0836-2773878

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಿ.

| ವಿಜಯವಾಣಿ ಸುದ್ದಿಜಾಲ ಗಜೇಂದ್ರಗಡ ಮನುಷ್ಯನಿಗೆ ಮುಖ್ಯವಾದ ಆಸ್ತಿ ಆರೋಗ್ಯ. ಆರೋಗ್ಯ ಸರಿಯಾಗಿದ್ದರೆ ಏನನ್ನಾದರೂ ಸಾಧಿಸಬಹುದು. ಪ್ರತಿಯೊಬ್ಬರೂ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್ .ವಿ. ಸಂಕನೂರ ಹೇಳಿದರು.
ತಾಲೂಕಿನ ಸೂಡಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ವೀರಶೈವ ಧರ್ಮಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಸಮಾರಂಭಉದ್ಘಾಟಿಸಿ ಅವರು ಮಾತನಾಡಿದರು. ಜನರಲ್ಲಿ ಆರೋಗ್ಯ ರಕ್ಷಣೆ ಜಾಗೃತಿ ಮೂಡಿಸಲು ಸೂಡಿ ಜುಕ್ತಿ ಹಿರೇಮಠದ ಶ್ರೀ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಮತ್ತಿತರ ಶಿಬಿರ ಆಯೋಜಿಸುವ ಮೂಲಕ ಸಾಮಾಜಿಕ ಕಾರ್ಯ ಹಮ್ಮಿಕೊಂಡಿರುವುದು ಶ್ಲಾಘನೀಯ. ಜನರು ಆಯುಷ್ಮಾನ್ ಭಾರತ ಯೋಜನೆಯ ಸದುಪಯೋಗ ಪಡೆಯಬೇಕು ಎಂದರು.
ಡಾ. ಆನಂದ ಪಾಂಡುರಂಗಿ ಮಾತನಾಡಿ, ಮನುಷ್ಯ ಬದುಕಿಗಾಗಿ ಸಂಪಾದನೆ ಮಾಡಬೇಕೆ ವಿನಹ ಸಂಪಾದನೆಗಾಗಿ ಬದುಕಬಾರದು. ದೈಹಿಕ, ಮಾನಸಿಕ ಆರೋಗ್ಯ ಇದ್ದಾಗ ಮಾತ್ರ ಸುಖ ಜೀವನ ನಡೆಸಲು ಸಾಧ್ಯ ಎಂದರು.
ಗದಗ ತಾಲೂಕಿನ ಸೂಡಿಯಲ್ಲಿ ಏರ್ಪಡಿಸಿದ್ದ ಧರ್ಮ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಉದ್ಘಾಟಿಸಿದರು. ಸೂಡಿ ಜುಕ್ತಿ ಹಿರೇಮಠದ ಶ್ರೀ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ, ಡಿಎಚ್‌ ಒ ಎಸ್.ಎಸ್. ನೀಲಗುಂದ, ಧಾರವಾಡ ಡಿಎಚ್‌ಒ ಡಾ. ಹೋನಕೇರಿ, ಇತರರಿದ್ದರು. ಪಾಲ್ಗೊಳ್ಳಬೇಕು. ಸದಾಕಾಲ ಸಕಾರಾತ್ಮಕ ಚಿಂತನೆಗಳನ್ನು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ವೇ.ಮೂ. ಪುಟ್ಟಯ್ಯ ಶಾಸ್ತ್ರಿಗಳು ಆಲಳ್ಳಿಮಠ, ಯಜುರ್ವೇದ ವೈದಿಕ ವೃಂದ, ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಶ್ರೀ ಗುರುಸಿದ್ದೇಶ್ವರ ಶಿವಾಚಾರ್ಯರು, ಶ್ರೀ ಚೆನ್ನಸಿದ್ದೇಶ್ವರ ಶಿವಾಚಾರ್ಯರು, ಶ್ರೀ ಫಕೀರೇಶ್ವರ ಶಿವಾಚಾರ್ಯರು,
ಸಾನ್ನಿಧ್ಯ ವಹಿಸಿದ್ದರು.
52 ಯೂನಿಟ್ ರಕ್ತ ಸಂಗ್ರಹ
ಜಾತ್ರಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಟ್ಟು 52 ಯೂನಿಟ್ ರಕ್ತ ಸಂಗ್ರಹವಾಗಿದೆ. ಗಜೇಂದ್ರಗಡ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪ್ರಕಾಶ ಡಿ. ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

About Author: